• March 3, 2022

ಕಿಚ್ಚನ ಈಗ ಸಿನಿಮಾ ನಿರ್ಮಾಣದ ಸಂಸ್ಥೆಯಿಂದ ಹೊಸ ನಾಯಕ ಎಂಟ್ರಿ ! ಯಾರದು ?

ಕಿಚ್ಚನ ಈಗ ಸಿನಿಮಾ ನಿರ್ಮಾಣ ಮಾಡಿದ್ದ ಟಾಲಿವುಡ್‌ನ ಜನಪ್ರಿಯ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಇಲ್ಲಿಯ ವರೆಗೂ ಹೈ ಬಜೆಟ್ ಹಾಗೂ ಕಂಟೆಂಟ್ ಸಿನಿಮಾಗಳನ್ನು ಪ್ರೇಕ್ಷಕರ ಮುಂದೆ ತರುತ್ತಾ ಬಂದಿದೆ…. ಇದೀಗ ವಾರಾಹಿ ರಾಧಾ ಕೃಷ್ಣ ಸಾರಥ್ಯದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡ್ತಿದ್ದು, ಈ ಚಿತ್ರದ ಮೂಲಕ ಜನಾರ್ದನ ರೆಡ್ಡಿ ಪುತ್ರ ಕಿರೀಟಿಯನ್ನು ನಾಯಕನಾಗಿ ಪರಿಚಯಿಸ್ತಿದೆ.

ಇನ್ನೂ ಹೆಸರಿಡದ ಈ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸಲಾಗ್ತಿದ್ದು, ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು,‌ ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರನ್ನು ಈ ಸಿನಿಮಾದ ಭಾಗವಾಗಿದ್ದಾರೆ.

ಸಾಯಿ ಕೊರಪಾಠಿ ನಿರ್ಮಿಸಲಿರುವ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಲಿದ್ದು, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣವನ್ನು ವಹಿಸಲಿದ್ದಾರೆ. ರವೀಂದರ್ ಆರ್ಟ್ ಡೈರೆಕ್ಟರ್ ಆಗಿ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್‌ಗಳಿಗೆ ನೃತ್ಯ ಸಂಯೋಜನೆ ಮಾಡಲಿದ್ದಾರೆ.

ಮಾರ್ಚ್ 4 ರಂದು ಚಿತ್ರದ ಅದ್ಧೂರಿ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇತರ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ….

Leave a Reply

Your email address will not be published. Required fields are marked *