- February 2, 2022
ನಟಿ ಜಯಪ್ರದಾ ತಾಯಿ ನಿಧನ

ಹಿರಿಯ ನಟಿ ಹಾಗೂ ಬಿಜೆಪಿ ಮುಖಂಡೆ ಜಯಪ್ರದಾ ಅವರಿಗೆ ಮಾತೃ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ನೀಲವೇಣಿ (85) ಮಂಗಳವಾರ ಮೃತಪಟ್ಟಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ನೀಲವೇಣಿ ಅವರನ್ನು ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ

ಇದೇ ಸಮಯದಲ್ಲಿ ದೆಹಲಿಯಲ್ಲಿದ್ದ ಜಯಪ್ರದಾ ತಾಯಿ ಮೃತಪಟ್ಟಿರುವ ಸುದ್ದಿ ಕೇಳಿ ತಕ್ಷಣ ಹೈದರಾಬಾದ್ ಕಡೆ ಪ್ರಯಾಣ ಬೆಳೆಸಿದರು. ಜಯಪ್ರದಾ ತಾಯಿಯ ಸಾವಿಗೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ