- January 12, 2022
ಅನೀಶ್ 10ನೇ ಸಿನಿಮಾಗೆ ಬೆಂಕಿ ಟೈಟಲ್ – ಫಸ್ಟ್ ಲುಕ್ ರಿವಿಲ್

ಸ್ಯಾಂಡಲ್‌ವುಡ್ ನ ಸುಪ್ರಿಂ ಸ್ಟಾರ್ ಅನೀಶ್ ತೇಜ್ವರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅನೀಶ್ ಜನುಮದಿನದ ಪ್ರಯುಕ್ತ ಅವ್ರೇ ನಟಿಸಿ, ನಿರ್ಮಾಣ ಮಾಡಿರುವ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಿದೆ.

ನಮ್ ಏರಿಯಾಲಿ ಒಂದಿನ, ಪೊಲೀಸ್ ಕ್ವಾಟ್ರಸ್, ಅಕಿರ, ವಾಸು ನನ್ ಪಕ್ಕ ಕಮರ್ಷಿಯಲ್, ರಾಮಾರ್ಜುನ ಹೀಗೆ ಕಮರ್ಷಿಯಲ್ ಸಿನಿಮಾ ಮೂಲಕ ಪ್ರೇಕ್ಷಕರನ್ನ ರಂಜಿಸಿದ ಅನೀಶ್ ಸದ್ಯ ತಮ್ಮ ಹತ್ತನೇ ಸಿನಿಮಾ ಅನೌನ್ಸ್ ಮಾಡಿದ್ದಾರೆ…
ಹತ್ತನೇ ಸಿನಿಮಾಗಾಗಿ ಅನೀಶ್ ಲುಕ್ ಬದಲಾಯಿಸಿಕೊಂಡಿದ್ದು ಗಡ್ಡ ಮೀಸೆ ಬಿಟ್ಟುಕೊಂಡು ಖಡಕ್ ಲುಕ್ ನಲ್ಲಿ ಕಾಣಿಸಿಕೊಳ್ಳಲು ನಿರ್ಧರಿಸಿದ್ದಾರೆ..
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್. ಬಾಬು ಅವರ ಪುತ್ರ, ಶಾನ್ ಬೆಂಕಿ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು ಇದು ಇವರ ಚೊಚ್ಚಲ ಸಿನಿಮಾ. ಈಗಾಗಲೇ ಸಿನಿಮಾದ ಶೇ. 80ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದ್ದು, ಹಾಡು ಮತ್ತು ಒಂದಷ್ಟು ಟಾಕಿ ಭಾಗದ ಶೂಟಿಂಗ್ ಮಾತ್ರ ಬಾಕಿ ಇದೆ.

ಅನೀಶ್ ಗೆ ಜೋಡಿಯಾಗಿ ರೈಡರ್ ಸಿನಿಮಾ ಖ್ಯಾತಿಯ ಸಂಪದ ನಟಿಸಿದ್ದು, ಶೃತಿ ಪಾಟೀಲ್, ಅಚ್ಯುತ್ ಕುಮಾರ್, ಸಂಪತ್, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗ ಸಿನಿಮಾದಲ್ಲಿದ್ದೂ, ಕೌಶಿಕ್ ಹರ್ಷ ಸಂಗೀತ ಸಂಯೋಜನೆ, ವೀನಸ್ ನಾಗರಾಜ್ ಮೂರ್ತಿ ಕ್ಯಾಮೆರಾ ವರ್ಕ್ ಸಿನಿಮಾದಲ್ಲಿದೆ.
