- December 1, 2021
ಪದವಿ ಪೂರ್ವ ಶಿಕ್ಷಣ ಪಡೆಯಲು ಬಂದ ದಿವ್ಯಾ ಉರುಡುಗ


ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಚಿತ್ರ “ಪದವಿಪೂರ್ವ”ಕ್ಕೆ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ನಟಿ ‘ದಿವ್ಯ ಉರುಡುಗ’ ಎಂಟ್ರಿ ಕೊಟ್ಟಿದ್ದಾರೆ…
ಸಿನಿಮಾದಲ್ಲಿ ದಿವ್ಯ ಅತಿಥಿ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ…ದಿವ್ಯ ನಟಿಸಲಿರುವ ಭಾಗದ ಚಿತ್ರೀಕರಣವು ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ಶೀಘ್ರದಲ್ಲೇ ಶುರು ಆಗಲಿದ್ದು, ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ.

ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣವು ಕಳೆದ ತಿಂಗಳಷ್ಷೇ ಪೂರ್ಣಗೊಂಡಿದ್ದು, ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಸಿದ ಚಿತ್ರೀಕರಣದ ದೃಶ್ಯಗಳು ಅತ್ಯಂತ ಸೊಗಸಾಗಿ ಮೂಡಿಬಂದಿದ್ಯಂತೆ… ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.. ಯೋಗರಾಜ್ ಭಟ್ ಸಾಹಿತ್ಯ ರಚಿಸಿದರೆ, ಸಂತೋಷ್ ರೈ ಪಾತಾಜೆ ಕ್ಯಾಮೆರಾವರ್ಕ್ ಸಿನಿಮಾಗಿದೆ…
