- December 30, 2021
ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯತ್ವ ಪಡೆದ ಡಿಕೆ ಶಿವಕುಮಾರ್!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾಣಿಜ್ಯ ಮಂಡಳಿಯ ಸದಸ್ಯತ್ವ ಪಡೆದಿದ್ದಾರೆ…ರಾಜಕಾರಣಿಗೇಕೆ ಸಿನಿಮಾರಂಗದ ಸದಸ್ಯತ್ವ ಅಂತ ಯೋಚನೆ ಮಾಡಬೇಡಿ…ಡಿಕೆಶಿ ಸದಸ್ಯತ್ವ ಪಡೆದಿರೋ ಒಂದೆಳ್ಳೆ ಕೆಲಸಕ್ಕಾಗಿ..ಸದಸ್ಯತ್ವ ಪಡೆದುಕೊಂಡು,ಮೇಕೆದಾಟು ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಡಿಕೆಶಿ ಈ ಹಿಂದಿನಿಂದಲೂ ಚಿತ್ರೋದ್ಯಮದೊಂದಿಗೆ ನಂಟು ಇಟ್ಟುಕೊಂಡಿದ್ದರು. ಪ್ರದರ್ಶನಕಾರರಾಗಿ ಹಾಗೂ ವಿತರಕರಾಗಿ ಅವರು ಕಾರ್ಯ ನಿರ್ವಹಿಸಿದ್ದರು.
ಆದರೆ, ಇತ್ತೀಚೆಗೆ ಅವರ ನಂಟು ಕಡಿಮೆಯಾಗಿತ್ತು. ಬೆಂಗಳೂರಿನಲ್ಲಿ ಮಲ್ಟಿಪ್ಲೆಕ್ಸ್ ಹೊಂದಿರುವ ಡಿ.ಕೆ. ಶಿವಕುಮಾರ್ ಪ್ರದರ್ಶಕನಾಗಿ ಮತ್ತೆ ಸಕ್ರಿಯರಾಗಿದ್ದಾರೆ. ಹೀಗಾಗಿ ಅವರು ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯತ್ವ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಅವರು ಮೇಕೆದಾಟು ಹೋರಾಟಕ್ಕೆ ಬೆಂಬಲ ನೀಡುವಂತೆ ಚಿತ್ರರಂಗಕ್ಕೆ ಮನವಿ ಮಾಡಿದ್ದಾರೆ.
ಡಿಕೆಶಿ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿ, ಮಂಡಳಿಯ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದ ಅವರು, ಸದಸ್ಯತ್ವ ಫಾರ್ಮ್ ಭರ್ತಿ ಮಾಡಿ ಕೊಟ್ಟರು. ವಾಣಿಜ್ಯ ಮಂಡಳಿಗೆ ಭೇಟಿ ನೀಡಿರುವ ಕುರಿತು ಕೂಡ ಮಾತನಾಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ, ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಹೀಗಾಗಿ ಈ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಈಗಾಗಲೇ ಹಲವು ಸಂಘಟನೆಗಳಿಗೆ ಮನವಿ ಮಾಡಲಾಗಿದೆ. ಈ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷ ಜೈರಾಜ್, ಕಾರ್ಯದರ್ಶಿ ನಾಗಣ್ಣ, ಮಾಜಿ ಅಧ್ಯಕ್ಷ ಚಿನ್ನೇಗೌಡ, ಸಾ.ರಾ. ಗೋವಿಂದು ಸೇರಿದಂತೆ ಹಲವರು ಭಾಗಿಯಾಗಿದ್ದರು.

ನಟ ಸುದೀಪ್, ಶಿವರಾಜ್ಕುಮಾರ್, ಯಶ್, ದರ್ಶನ್ ಸೇರಿದಂತೆ ಎಲ್ಲ ನಟರಿಗೂ ವಾಣಿಜ್ಯ ಮಂಡಳಿ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಆದರೆ, ಹೋರಾಟಕ್ಕೆ ಬರುವಂತೆ ಹಾಗೂ ಬೆಂಬಲಿಸುವಂತೆ ಯಾರಿಗೂ ಬಲವಂತ ಮಾಡುವುದಿಲ್ಲ ಎಂದು ಹೇಳಿದ್ದಾರೆ.