• November 28, 2021

ಪುನೀತ್ ನೆನಪಿನಲ್ಲಿ ‘ರೈಡ್ ಫಾರ್ ಅಪ್ಪು’ ಬೈಕ್ ಮರವಣಿಗೆ

ಪುನೀತ್ ನೆನಪಿನಲ್ಲಿ ‘ರೈಡ್ ಫಾರ್ ಅಪ್ಪು’ ಬೈಕ್ ಮರವಣಿಗೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಸಾಲಷ್ಟು ಕೆಲಸಗಳು ನಡೆಯುತ್ತಲೇ ಇವೆ‌‌‌…ಇಂದು ಟೀಮ್ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೊ ವತಿಯಿಂದ ಅಪ್ಪು ಅಗಲಿದ ಒಂದು ತಿಂಗಳ ನೆನಪಿಗಾಗಿ ‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆ ನಡೆಸಲಾಯ್ತು….

ಸ್ವಾತಂತ್ರ್ಯ ಉದ್ಯಾನದಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ಮನಗಾಣಿಸುವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಸಚಿವ ಅಶ್ವತ್ಥ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪುನೀತ್ ಅವರ ಸಾಧನೆಯು ದಿನದಿನವೂ ಹೆಚ್ಚೆಚ್ಚು ಜನರನ್ನು ತಲುಪುತ್ತಿದೆ. ಇದು ನಮ್ಮ ವಿದ್ಯಾರ್ಥಿ ಸಮೂಹ ಸೇರಿದಂತೆ ಎಲ್ಲರಿಗೂ ಸ್ಫೂರ್ತಿಯಾಗಬೇಕು. ಪ್ರತಿಯೊಬ್ಬರೂ ತಂತಮ್ಮ ಕ್ಷೇತ್ರದಲ್ಲಿ ಸ್ವಂತಿಕೆ ಹಾಗೂ ಸಮಾಜಪರ ಮನೋಭಾವದೊಂದಿಗೆ ಕೆಲಸ ಮಾಡಬೇಕು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೊತೆಗೆ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಜನಸೇವೆಯಲ್ಲಿ ತೊಡಗಲು ಸದಾ ಪ್ರೇರಕ ಶಕ್ತಿಯಾಗಿ ಚಿರಾಯುವಾಗಿರುತ್ತಾರೆ ಎಂದು ಮಲ್ಲೇಶ್ವರ ಕ್ಷೇತ್ರದ ಶಾಸಕರೂ ಆದ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

Leave a Reply

Your email address will not be published. Required fields are marked *