- January 3, 2022
ಮರಿ ಟೈಗರ್ ಗೆ ಗೋಲ್ಡನ್ ಸ್ಟಾರ್ ಸಾಥ್

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ”ವರದ” ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ…ವರದ ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. ಈ ಮೂಲಕ ಮರಿ ಟೈಗರ್ ಗೆ ಗೋಲ್ಡನ್ ಸ್ಟಾರ್ ಸಾಥ್ ನೀಡಿದ್ದಾರೆ…

ಇನ್ನು ಯಾರೇ ನೀನು ಹಾಡು ಬಿಡುಗಡೆ ಆದ ಕೆಲವೇ ಕ್ಷಣಗಳಲ್ಲಿ ಹಾಡಿಗೆ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದು ಈ ಹಾಡಿಗೆ ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

“ರಾಬರ್ಟ್” ಚಿತ್ರದ ನಂತರ ವಿನೋದ್ ಪ್ರಭಾಕರ್ ನಟಿಸಿರುವ ಸಿನಿಮಾ ಇದಾಗಿದ್ದು ಈ ಚಿತ್ರ ಜನವರಿ
28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವರದ ಅಇನಿಮಾವನ್ನ ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶನ ಮಾಡಿದ್ದಾರೆ…
ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
