- February 5, 2022
ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಸಿದ್ದರಾದ ಸಂದೇಶ್ ಪ್ರೊಡಕ್ಷನ್ಸ್

ಕನ್ನಡ ಸಿನಿಮಾರಂಗದಲ್ಲಿ ಸಾಕಷ್ಟು ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿರೋ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣಕ್ಕೆ ಪ್ಲಾನ್ ಆಗ್ತಿದೆ…
ತಮ್ಮ ಅಮೋಘ ನೃತ್ಯದ ಮೂಲಕ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣ ಆಗಲಿದೆ …

ಈಗಾಗಲೇ ಪ್ರಭುದೇವಾ ಅವ್ರ ಜೊತೆಮಾತುಕತೆ ಆಗಿದ್ದು ಸದ್ಯದಲ್ಲೇ ಈ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಮಾಹಿತಿ ನೀಡುವುದಾಗಿ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
ಇತ್ತೀಚಿಗೆ ಸಂದೇಶ್ ನಾಗರಾಜ್ ತಮ್ಮ ಸಂಸ್ಥೆಯ ಮೂಲಕ ಶಿವರಾಜ್ ಕುಮಾರ್ ಜೊತೆ ಸಿನಿಮಾ ನಿರ್ಮಾಣ ಮಾಡುವುದಾಗಿ ಅನೌನ್ಸ್ ಮಾಡಿದ್ರು