- December 2, 2021
ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಪರಿಸ್ಥಿತಿ ಗಂಭೀರ


ಹಿರಿಯ ನಟ ಶಿವರಾಮ್ ಅವರ ಅರೋಗ್ಯ ಪರಿಸ್ಥಿತಿ ಗಂಭೀರವಾಗಿದೆ…ಶಿವರಾಮ್ ಅವರ ಅರೋಗ್ಯದ ಬಗ್ಗೆ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು.ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಶಿವರಾಮ್ ಅವ್ರಿಗೆ ಕಾರ್ ಆಕ್ಸಿಡೆಂಟ್ ಆಗಿತ್ತಂತೆ… ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ…
ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ಹೋಗಿದ್ದ ವೇಳೆ ರೂಂ ನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ..ಮೊನ್ನೆ ರಾತ್ರಿಯೇ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಲಾಗಿದೆ..ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ..
ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದದ್ದು
ವಯಸ್ಸಾದ ಹಿನ್ನೆಲೆ ಸರ್ಜರಿ ಮಾಡಲು ಆಗಿಲ್ಲ
ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದು ವರೆದಿದೆ