- February 4, 2022
ಕೆಜಿಎಫ್ ಸಿನಿಮಾ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಶ್ರೀನಿಧಿ ಶೆಟ್ಟಿ

ಕೆಜಿಎಫ್ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಅಂತ ಕಾತುರದಿಂದ ಕಾದಿರುವ ಅಭಿಮಾನಿಗಳಿಗೆ ಸಿನಿಮಾದ ನಟಿ ಶ್ರೀನಿಧಿ ಶೆಟ್ಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ..
ಹೌದು ಸದ್ಯ ಕೆಜಿಎಫ್ ನ ಇಡೀ ತಂಡ ಕುಂದಾಪುರದಲ್ಲಿ ಬೀಡುಬಿಟ್ಟಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸವನ್ನು ಕಂಪ್ಲೀಟ್ ಮಾಡುತ್ತಿದೆ… ಅದರಂತೆಯೇ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರದ ಡಬ್ಬಿಂಗ್ ಮುಗಿಸಿರುವುದಾಗಿ ಅನೌನ್ಸ್ ಮಾಡಿದ್ದಾರೆ


ಡಬ್ಬಿಂಗ್ ಕಂಪ್ಲೀಟ್ ಆದ ನಂತರ ಫೋಟೋಗಳನ್ನ ಶೇರ್ ಮಾಡಿರುವ ಶ್ರೀನಿಧಿ ಶೆಟ್ಟಿ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದ್ದೇವೆ ಎಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ..


ಈಗಾಗಲೇ ಅನೌನ್ಸ್ ಮಾಡಿರುವಂತೆ ಕೆಜಿಎಫ್ ಸಿನಿಮಾ ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರಲಿದ್ದು ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು.. ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ… ಹೊಂಬಾಳೆ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡಿದೆ ..ಇತ್ತಿಚೀಗಷ್ಟೇ ಕರಾವಳಿ ಭಾಗದ ದೇವಸ್ಥಾನಗಳಿಗೆ ಭೇಟಿ ಕೊಟ್ಟು ಚಿತ್ರತಂಡ ಸಿನಿಮಾದ ಪ್ರಚಾರ ಕಾರ್ಯವನ್ನು ಆರಂಭ ಮಾಡಿದೆ …