• January 1, 2022

ಮಾಫಿಯಾ ಮುಗಿಸಿ ಗಣ ನಾಗಲಿರೋ ಪ್ರಜ್ವಲ್ ದೇವರಾಜ್

ಮಾಫಿಯಾ ಮುಗಿಸಿ ಗಣ ನಾಗಲಿರೋ ಪ್ರಜ್ವಲ್ ದೇವರಾಜ್

ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ಸದ್ಯ ಮಾಫಿಯಾ ಸಿನಿಮಾದ‌ ಚಿತ್ರೀಕರಣದಲ್ಲಿ‌ ಬ್ಯುಸಿ ಆಗಿದ್ದಾರೆ…ಮಾಫಿಯಾ ಸಿನಿಮಾ‌ನಂತ್ರ ಗಣ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ….ಸಿನಿಮಾದ ಮಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿದೆ..ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ ರೆಡ್ಡಿ ಆರಂಭಫಲಕ ತೋರಿದರು. ಪ್ರಜ್ವಲ್ ಪತ್ನಿ ರಾಗಿಣಿ ಚಂದ್ರನ್ ಕ್ಯಾಮೆರಾ ಚಾಲನೆ ಮಾಡಿದ್ದಾರೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಹರಿ ಪ್ರಸಾದ್ ಜಕ್ಕ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಹರಿಪ್ರಸಾಸ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ .

ಚರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದಾರೆ. ಜೈ ಆನಂದ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ‌‌.

ಪ್ರಜ್ವಲ್ ಅವರಿಗೆ ನಾಯಕಿಯಾಗಿ ಸಾರಾ ಹರೀಶ್(ಭರತ ಬಾಹುಬಲಿ ಖ್ಯಾತಿ) ನಟಿಸುತ್ತಿದ್ದಾರೆ. ಸಂಪತ್ ಕುಮಾರ್, ರವಿ ಕಾಳೆ, ಶಿವರಾಜ್ ಕೆ ಆರ್ ಪೇಟೆ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಫೆಬ್ರವರಿ ಮೊದಲವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Leave a Reply

Your email address will not be published. Required fields are marked *